ನವದೆಹಲಿ, ಮಾ 24(DaijiworldNews/MS): ಕಳೆದ 2020 ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಪ್ರಕರಣದ ಪಿತೂರಿ ಆರೋಪಿಯಾಗಿರುವ ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ.
ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿದ್ದರು.
ಫೆಬ್ರವರಿ 2020 ರಲ್ಲಿ ನಡೆದಿದ್ದ ದಿಲ್ಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಪ್ರಕರಣ ದಾಖಲಿಸಲಾಗಿದೆ. ಗಲಭೆಯಲ್ಲಿ 53 ಜನರು ಬಲಿಯಾಗಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. , 2020ರ ಸೆಪ್ಟೆಂಬರ್ 14, 2020 ಉಮರ್ ಖಾಲಿದ್ ನನ್ನು ಬಂಧಿಸಲಾಗಿತ್ತು.
ವಾದದ ಸಮಯದಲ್ಲಿ, ಆರೋಪಿಯು ತನ್ನ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.ಪ್ರಕರಣದ ವಿಚಾರಣೆ ಮಾರ್ಚ್ 3 ರಂದು ಮುಕ್ತಾಯಗೊಂಡಿತ್ತು ಮತ್ತು ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.