ಬೆಂಗಳೂರು, ಮಾ 25 (DaijiworldNews/DB): ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಒಡ್ಡಿದ್ದ ಮತ್ತೋರ್ವ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆಂಗಳೂರು ನಗರ ಪೊಲೀಸರು ತಮಿಳುನಾಡು ರಾಜ್ಯದಿಂದ ಬಂಧಿಸಿ ಬೆಂಗಳೂರಿಗೆ ಶುಕ್ರವಾರ ಬೆಳಗ್ಗೆ ಕರೆ ತಂದಿದ್ದಾರೆ. ಆ ಮೂಲಕ ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಆರೋಪಿಯನ್ನು ಎಂಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ) ಸದಸ್ಯ ಕೋವೈ ರಹಮ್ಮತುಲ್ಲಾ ಮತ್ತು ಇನ್ನೊಬ್ಬ ಆರೋಪಿಯನ್ನು ಈ ಹಿಂದೆಯೇ ಬಂಧಿಸಲಾಗಿತ್ತು.