ಹುಬ್ಬಳ್ಳಿ, ಮಾ 26 (DaijiworldNews/HR): ಬಜೆಟ್ನಲ್ಲಿ ಮಂಡನೆಯಾದ ಪ್ರಮುಖ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಜೆಟ್ನಲ್ಲಿ ಮಂಡನೆಯಾದ ಪ್ರಮುಖ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ ಎಂದರು.
ಇನ್ನು ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಂಬರ್ ಒನ್ ಇದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ವೇಳೆ ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.