ನವದೆಹಲಿ, ಮಾ 26 (DaijiworldNews/HR): ಬೆಲೆ ಏರಿಕೆ ವಿರುದ್ಧ ಮೆಹಂಗೈ-ಮುಕ್ತ್ ಭಾರತ್ ಅಭಿಯಾನದ ಅಡಿಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ ದೇಶಾದ್ಯಂತ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಕಾಂಗ್ರೆಸ್ ಆಯೋಜಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೊದಲ ಹಂತದ ಅಭಿಯಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಮಾರ್ಚ್ 31 ರಂದು ತಮ್ಮ ಮನೆಗಳ ಹೊರಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳೊಂದಿಗೆ ಸಮಾಲೋಚಿಸಿ ಮೂರು-ಹಂತದ ಕಾರ್ಯಕ್ರಮ ನಡೆಯಲಿದ್ದು, ಮೆಹಂಗೈ-ಮುಕ್ತ್ ಭಾರತ್ ಅಭಿಯಾನದಲ್ಲಿ ಜನರಿಗಾಗಿ ಹೋರಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.