ಬಾಗಲಕೋಟೆ, ಮಾ 27 (DaijiworldNews/HR): ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಲು ಸಿದ್ದರಾಮಯ್ಯನಂತವರು ಒಬ್ಬರು ಸಾಕು. ಮೊದಲಿಗೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತು ಬಿಸಾಕಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು ಸಿದ್ದರಾಮಯ್ಯನಂತವರು ಒಬ್ಬರು ಇದ್ದರೆ ಕಾಂಗ್ರೆಸ್ ನಿರ್ನಾಮ ಖಂಡಿತ. ಅವರು ಕೋರ್ಟ್ಗೆ ಗೌರವ ಕೊಡೋದನ್ನು ಮೊದಲು ಕಲಿತುಕೊಳ್ಳಲಿ. ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ತಗೊಳ್ಳಿ, ಇಲ್ಲ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತು ಬಿಸಾಕಬೇಕು ಎಂದರು.
ಇನ್ನು ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಒಡೆದಾಯ್ತು, ಈಗ ಸ್ವಾಮೀಜಿಗಳಲ್ಲಿ ಹಿರಿಯ ಸ್ವಾಮೀಜಿಗಳು, ಕಿರಿಯ ಸ್ವಾಮೀಜಿಗಳು ಎಂದು ಒಡೆಯುವ ಪ್ರಯತ್ನವನ್ನು ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.