ಕೊರ್ಬಾ, ಮಾ 27 (DaijiworldNews/HR): ಛತ್ತೀಸ್ಗಢದ ಸೂರಜ್ ಪುರ ಜಿಲ್ಲೆಯಲ್ಲಿ ಯುವಕನೊಬ್ಬ ವಿದ್ಯಾರ್ಥಿನಿ ಮೇಲೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕಿ ಕೊಂದು ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಘಟನೆ ನಡೆದಿದೆ.
ಆರೋಪಿಯನ್ನು ಸಬೀರ್ ಅಲಿ ಅಲಿಯಾಸ್ ಬಾಬಾ ಖಾನ್ ಎಂದು ಪೊಲೀಸರು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸೂರಜ್ ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ರಾಥೋಡ್ ಮಾಹಿತಿ ನೀಡಿದ್ದು, 12 ನೇ ತರಗತಿ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದು, ಆಕೆಯ ತಾಯಿ ಬಿಲಾಸ್ ಪುರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅನಾರೋಗ್ಯಪೀಡಿತ ತಂದೆಯನ್ನು ನೋಡಿಕೊಳ್ಳುತ್ತಿದ್ದರು, ಆಕೆಯ ಕಿರಿಯ ಸಹೋದರ ಆಟವಾಡಲು ಹೊರಗೆ ಹೋಗಿದ್ದರು. ಆರೋಪಿಯು ಸಂತ್ರಸ್ತೆಯನ್ನು ಮನೆಯಲ್ಲಿ ಏಕಾಂಗಿಯಾಗಿ ಇರುವುದನ್ನು ಕಂಡು ಅಲ್ಲಿಗೆ ಹೋಗಿದ್ದು, ಆಕೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸ್ಕಾರ್ಫ್ನಿಂದ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆ ವ್ಯಕ್ತಿ ಸಂತ್ರಸ್ತೆಯ ದೇಹವನ್ನು ಸೀಲಿಂಗ್ ಫ್ಯಾನ್ಗೆ ನೇತುಹಾಕಿ, ಆತ್ಮಹತ್ಯೆ ಮಾಡಿಕೊಂಡಂತೆ ಕಾಣುವಂತೆ ಪೆನ್ನನ್ನು ಬಳಸಿ ಆಕೆಯ ಕೈಯಲ್ಲಿ ಆತ್ಮಹತ್ಯೆ ಪತ್ರವನ್ನು ಬರೆದಿದ್ದಾನೆ ಎಂದು ಆರೋಪಿಸಲಾಗಿದೆ ಎಂಬುದಾಗಿ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಸಂತ್ರಸ್ತೆಯ ಸಹೋದರ ಮತ್ತು ನೆರೆಹೊರೆಯವರು ಆಕೆ ನೇಣು ಬಿಗಿದುಕೊಂಡಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಚಾರಣೆಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.