ಬೆಂಗಳೂರು, ಮಾ 28 (DaijiworldNews/HR): ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ರಾಜ್ಯದ ಶಾಲೆಗಳಲ್ಲಿ ಹೈಕೋರ್ಟ್ ತೀರ್ಪುನ್ನು ವಿದ್ಯಾರ್ಥಿನಿಯರು ಪಾಲಿಸಿ ಪರೀಕ್ಷೆ ಬರೆಯುತ್ತಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಪರೀಕ್ಷೆ ಬರೆಯುತ್ತಿದ್ದು, ಈ ವೇಳೆ ಪೋಷಕರು ಹಿಜಾಬ್ ಮುಖ್ಯ ಅಲ್ಲ ಪರೀಕ್ಷೆ ಮುಖ್ಯ ಎಂದಿದ್ದಾರೆ.
ಕೆಲವು ಶಾಲೆಗಳಲ್ಲಿ ಹಿಜಾಬ್ ಹಾಕಿಕೊಂಡು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದು, ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯಲು ಸಿಬ್ಬಂದಿಗಳು ಸೂಚಿಸಿದ್ದಾರೆ. ಅದರಂತೆ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆದಿದ್ದಾರೆ.
ಇನ್ನು ಹಿಜಾಬ್ ವಿಚಾರಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇಲ್ಲ. ಹೈಕೋರ್ಟ್ ಆದೇಶ ಪಾಲಿಸುವುದು ಸರ್ಕಾರದ ಕರ್ತವ್ಯ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.