ಬೆಂಗಳೂರು, ಮಾ 28 (DaijiworldNews/HR): ಕಮೀಷನ್ ಆರೋಪದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿಗೆ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದೂರು ನೀಡಿದ್ದು, ಅವರು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದಿಂದ ಶೇ.40ರಷ್ಟು ಕಮೀಷನ್ ಕಾಮಗಾರಿ ಹಣದಲ್ಲಿ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿ ಸಚಿವ ಈಶ್ವರಪ್ಪ ವಿರುದ್ಧ ಪ್ರಧಾನಿ, ಸಿಎಂಗೆ ದೂರು ನೀಡಲಾಗಿದೆ ಎಂದರು.
ಇನ್ನು ಬಿಜೆಪಿ ಸರ್ಕಾರದಿಂದ ಶೇ.40ರಷ್ಟು ಕಮೀಷನ್ ದಂಧೆ ಹೆಚ್ಚಾಗುತ್ತಿದ್ದು, ಈಗಾಗಲೇ ಪರಿಷತ್ ನಲ್ಲಿಯೂ ಈ ಬಗ್ಗೆ ಚರ್ಚೆಗೆ ಅವಕಾಶ ಕೇಳಿದ್ದೇವೆ. ಗುತ್ತಿಗೆದಾರರಿಂದ ಕಮೀಷನ್ ಆರೋಪ ಹೊತ್ತಿರುವ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.