ಮುಜಾಫರ್, ಮಾ 28 (DaijiworldNews/HR): ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಮುಜಾಫರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಕೇಶ್ ಟಿಕಾಯತ್ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟಿಕಾಯತ್ ಅವರ ಮನೆಗೆ ಪೊಲೀಸ್ ತಂಡವು ಸೋಮವಾರ ಭೇಟಿ ನೀಡಿ ಅವರ ಹೇಳಿಕೆಯನ್ನು ದಾಖಲಿಸಿದ್ದು, ಬೆದರಿಸಲು ಬಳಸಲಾದ ಸಂಖ್ಯೆಯ ಕರೆ ವಿವರಗಳ ದಾಖಲೆಯನ್ನು ಪೊಲೀಸರು ಪರಿಶೀಲಿಸಿದ್ದಾರೆ.
ಇನ್ನು ಮುಜಾಫರ್ ನಗರದ ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಯಾದವ್ ಅವ್ರು ದೂರು ಸ್ವೀಕರಿಸಲಾಗಿದೆ ಎಂದು ಖಚಿತಪಡಿಸಿದ್ದು, ತಂಡವೊಂದನ್ನ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.