ಶ್ರೀನಗರ, ಮಾ 28 (DaijiworldNews/HR): ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜೊತೆ ಸಂಬಂಧ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನ ಸುನ್ನರ್ಗುಂಡ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಭಯೋತ್ಪಾದಕರನ್ನು ವಸೀಮ್ ಎ ಗನೈ ಮತ್ತು ಇಕ್ಬಾಲ್ ಎ ಶೇಖ್ ಎಂದು ಗುರುತಿಸಲಾಗಿದೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಬಂಧಿತರಿಂದ ದೋಷಾರೋಪಣೆ ಸಾಮಗ್ರಿಗಳು, ಚೈನೀಸ್ ಪಿಸ್ತೂಲ್, ಎರಡು ಪಿಸ್ತೂಲ್ ಮ್ಯಾಗಜೀನ್ಗಳು, 12 ಪಿಸ್ತೂಲ್ ರೌಂಡ್ಗಳು, 32 ಎಕೆ 47 ರೌಂಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಬಂಧಿತ ಭಯೋತ್ಪಾದಕ ಸಹಚರರು ಲಾಜಿಸ್ಟಿಕ್ಸ್, ಆಶ್ರಯ ಮತ್ತು ಹೈಬ್ರಿಡ್ ಭಯೋತ್ಪಾದಕರಾಗಿ ಕಾರ್ಯನಿರ್ವಹಿಸಲು ಯುವಕರನ್ನು ಪ್ರೇರೇಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.