ಪುಣೆ,ಮಾ 29 (DaijiworldNews/HR): ಪ್ರಜಾಪ್ರಭುತ್ವ ಬಲಗೊಳ್ಳಲು ಪ್ರಬಲ ವಿರೋಧಪಕ್ಷ ಅಗತ್ಯ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾಗಲಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 'ಪ್ರಜಾಪ್ರಭುತ್ವ ಎಂಬುದು ಎರಡು ಚಕ್ರಗಳ ಮೇಲೆ ಸಾಗಲಿದೆ. ಒಂದು ಆಡಳಿತ ಪಕ್ಷ, ಮತ್ತೊಂದು ವಿರೋಧಪಕ್ಷ. ಇದೇ ಕಾರಣದಿಂದ ಕಾಂಗ್ರೆಸ್ ಬಲಗೊಳ್ಳಬೇಕು ಎಂಬುದು ನನ್ನ ಅಪೇಕ್ಷೆ ಎಂದರು.
ಇನ್ನು ಕಾಂಗ್ರೆಸ್ ದುರ್ಬಲಗೊಂಡಂತೆ ಆ ಸ್ಥಳವನ್ನು ಪ್ರಾದೇಶಿಕ ಪಕ್ಷಗಳು ಆವರಿಸಿಕೊಳ್ಳುತ್ತಿದ್ದು, ಈ ಬೆಳವಣಿಗೆಯು ಪ್ರಜಾಪ್ರಭುತ್ವದ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ ಎಂದು ಪ್ರತಿಪಾದಿಸಿದ್ದಾರೆ.