ಬೆಂಗಳೂರು, ಮಾ 29 (DaijiworldNews/HR): ಸಚಿವ ವಿ.ಸೋಮಣ್ಣ ಅವರು ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದು ಮಾ.30ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಸಚಿವ ಸೋಮಣ್ಣ ಜಾಮೀನು ಅರ್ಜಿ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ಮುಂದೆ ವಿಚಾರಣೆಗೆ ಬಂದಿದ್ದು, ಕೆಲ ಕಾಲ ವಾದ ಆಲಿಸಿದ ಬಳಿಕ ದೂರುದಾರರಾದ ರಾಮಕೃಷ್ಣಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು.
ಇನ್ನು ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಮತ್ತು ಭಷ್ಟಾಚಾರ ಆರೋಪ ಸಂಬಂಧ ಜನಪ್ರತಿನಿಗಳ ಕೋರ್ಟ್ಗೆ ಖುದ್ದು ಹಾಜರಾಗಲು ಸೋಮಣ್ಣ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಏ.16ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದ್ದಾರೆ.