ಬೆಂಗಳೂರು, ಮಾ 29 (DaijiworldNews/HR): ಉಪ ಲೋಕಾಯುಕ್ತ ಹುದ್ದೆಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಂ.ಫಣೀಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಫಣೀಂದ್ರ ಅವರು ಉಪ ಲೋಕಾಯುಕ್ತರಾಗಿ ಪ್ರಾಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದ್ದಾರೆ.
ಇನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.