ಹುಬ್ಬಳ್ಳಿ, ಮಾ 29 (DaijiworldNews/DB): ಗುರಾಯಿಸಿದ್ದನ್ನೇ ತಪ್ಪೆಂದು ಭಾವಿಸಿ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಆರೋಪಿಗಳಿಗೆ ಹುಬ್ಬಳ್ಳಿ 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.
ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ 2020ರ ಮಾರ್ಚ್ ನಲ್ಲಿ ಶಾಬುದ್ದಿನ್ ಎಂಬ ಯುವಕ ಗುರಾಯಿಸಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಶಮಸುದ್ದಿನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಜೈಲಾನಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಎರಡು ವರ್ಷಗಳ ಬಳಿಕ ಅಪರಾಧಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 1.50 ಲಕ್ಷ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ದಂಡ ಪಾವತಿಸಲು ವಿಫಲವಾದಲ್ಲಿ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ, ದಂಡದ ಮೊತ್ತದಲ್ಲಿ 1.45 ಲಕ್ಷ ರೂ. ಮೃತನ ಹೆತ್ತವರಿಗೆ ನೀಡಲು ನ್ಯಾಯಮೂರ್ತಿ ಆದೇಶಿಸಿದ್ದಾರೆ.