ಶ್ರೀನಗರ, ಮಾ 30 (DaijiworldNews/MS): ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
https://daijiworld.ap-south-1.linodeobjects.com/Linode/img_tv247/ms-3003222-sngar.jpg>
ಕೊಲೆಯಾದ ಉಗ್ರರನೋರ್ವನನ್ನು ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.ಈತ ಅನಂತನಾಗ್ ಮೂಲದ ಆನ್ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವಿಸ್'ನಲ್ಲಿ ಮಾಜಿ ಪತ್ರಕರ್ತನಾಗಿದ್ದ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ರಯೀಸ್ ಕಳೆದ ವರ್ಷ ಆಗಸ್ಟ್ನಲ್ಲಿ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆಯಾಗಿದ್ದನೆಂದು ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಭಟ್ ವಿರುದ್ಧ ಎರಡು ಎಫ್ಐಆರ್ಗಳು ದಾಖಲಾಗಿವೆ. ಮಾಜಿ ಪತ್ರಕರ್ತರೊಬ್ಬ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಮಾಧ್ಯಮಗಳ ದುರುಪಯೋಗವನ್ನು ಸೂಚಿಸುತ್ತದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಎನ್ಕೌಂಟರ್ನಲ್ಲಿ ಹತನಾದ ಮತ್ತೊಬ್ಬ ಭಯೋತ್ಪಾದಕನನ್ನು ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.