ನವದೆಹಲಿ, ಮಾ 30 (DaijiworldNews/DB): ಚುನಾವಣಾ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಚುನಾವಣೆ ಮುಗಿದ ತತ್ ಕ್ಷಣ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದರು.
ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಇದೀಗ ಉಕ್ರೇನ್-ರಷ್ಯಾ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅದನ್ನೇ ನೆಪವಾಗಿಟ್ಟುಕೊಂಡು ತೈಲ ಬೆಲೆ ಏರಿಕೆ ಮಾಡಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಎಂಟು ಬಾರಿ ತೈಲ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರತೀ ಲೀಟರ್ ಗೆ 5.60 ರೂ.ಗಳಷ್ಟು ಹೆಚ್ಚಾಗಿದೆ ಎಂದರು.
ಕೇಂದ್ರ ಸರ್ಕಾರವು ತೈಲ ಬೆಲೆ ಏರಿಕೆ ಮಾಡಿರುವುದರ ವಿರುದ್ಧ ಮಾರ್ಚ್ 31ರಂದು ದೆಹಲಿಯ ವಿಜಯ್ ಚೌಕ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದವರು ಇದೇ ವೇಳೆ ತಿಳಿಸಿದರು.