ಬೆಂಗಳೂರು,ಮಾ 30 (DaijiworldNews/HR): ಕಾಂಗ್ರೆಸ್ ಪಕ್ಷ ತೊರೆಯೋದಾಗಿಯೂ ಘೋಷಣೆ ಮಾಡಿದ್ದ ಸಿ.ಎಂ ಇಬ್ರಾಹಿಂ ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಿಷತ್ ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದಂತ ಕಾಂಗ್ರೆಸ್ ಎಂಎಲ್ಸಿ ಸಿ.ಎಂ ಇಬ್ರಾಹಿಂಗೆ ಆ ಸ್ಥಾನ ದೊರೆತಿರಲಿಲ್ಲ. ಹೀಗಾಗಿ ಬೇಸರಗೊಂಡಿರುವಂತ ಅವರು ಕಾಂಗ್ರೆಸ್ ಪಕ್ಷ ತೊರೆಯೋದಾಗಿಯೂ ಘೋಷಣೆ ಮಾಡಿದ್ದು, ಆ ಬಳಿಕ ಇದೀಗ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಿಗ್ಗೆ 11ಗಂಟೆಗೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಿಸಿದ್ದು, ಅದರಂತೆ ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದಂತ ಇಬ್ರಾಹಿಂ ಅವರು ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.