ನವದೆಹಲಿ, ಮಾ 30 (DaijiworldNews/HR): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು ಬಂಧಿಸಿದ್ದಾರೆ.
ಮನೆ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಆರು ಪೊಲೀಸ್ ತಂಡಗಳು ನಿರತವಾಗಿವೆ.
ಕೇಜ್ರಿವಾಲ್ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾವನ್ನು ಬುಧವಾರ ಒಡೆದಿದ್ದು, ಸಿಎಂ ಮನೆ ಸುತ್ತಲಿನ ಭದ್ರತಾ ತಡೆಗೋಡೆ ಮುರಿದಿರುವ ಹೋಗಿರುವ ಬಗ್ಗೆ ವರದಿಯಾಗಿದೆ.
ಇನ್ನು ಬಿಜೆಪಿ ಪ್ರಚಾರ ಮಾಡುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ವಿರುದ್ಧ ಕೇಜ್ರಿವಾಲ್ ತೀವ್ರ ಆಕ್ರೋಶ ಹೊರ ಹಾಕಿದ್ದು, ಈ ಹಿನ್ನೆಲೆಯಲ್ಲಿ ಅವರ ಮನೆಯ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.