ಬೆಂಗಳೂರು, ಮಾ 30 (DaijiworldNews/HR): ತೈಲಬೆಲೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಇಂದು ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯುತ್ತಿದೆ.
ಈ ಪ್ರತಿಭಟನೆಯಲ್ಲಿ ಡಿ. ಕೆ ಶಿವಕುಮಾರ್ ಸಣ್ಣ ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು, ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ವೇಳೆ ಮಾತನಾಡಿದಂತ ಡಿಕೆಶಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೆ ಹೋಗಿದ್ದು, ಆದಾಯ ಪಾತಾಳಕ್ಕೆ ಇಳಿದಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ ಎಂದರು.