ಕಲಬುರಗಿ, ಮಾ 30 (DaijiworldNews/HR): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಾರ್ಚ್ 28ರಂದು ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪದ ಮೇರೆಗೆ ಜೇವರ್ಗಿ ತಾಲ್ಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆದ ಬಗ್ಗೆ ಶ್ರೀರಾಮಸೇನೆಯ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಣ್ಣಗೌಡ ಮಾಲಿಪಾಟೀಲ ಡಿಡಿಪಿಐ ಅವರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಪರೀಕ್ಷೆಯ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.
ಇನ್ನು ಅಧೀಕ್ಷಕರ ವರದಿ ಆಧರಿಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಆಲೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಹಯಾದ್ ಬಾಗವಾನ ಅವರನ್ನು ಡಿಡಿಪಿಐ ಅಶೋಕ ಭಜಂತ್ರಿ ಹಾಗೂ ಕೊಡಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ್ ಅವರನ್ನು ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.