ನವದೆಹಲಿ, ಮಾ. 31 (DaijiworldNews/SM): ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ರಷ್ಯಾದ ವಿದೇಶಾಂಗ ಸಚಿವರು ಭಾರತ ಪ್ರವಾಸ ಕೈಗೊಂಡಿದ್ದಾರೆ. ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಗುರುವಾರ ಭಾರತಕ್ಕೆ ಎರಡು ದಿನಗಳ ಅಧಿಕೃತ ಭೇಟಿ ನೀಡಿದ್ದಾರೆ.
ಲಾವ್ರೋವ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಸಭೆ ನಡೆಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಎರಡು ದಿನಗಳ ಚೀನಾ ಪ್ರವಾಸವನ್ನು ಮುಗಿಸಿಕೊಂಡು ರಷ್ಯಾ ವಿದೇಶಾಂಗ ಸಚಿವರು ಭಾರತಕ್ಕೆ ಆಗಮಿಸುತ್ತಿದ್ದಾರೆ.