ಬೆಂಗಳೂರು, ಏ 1 (DaijiworldNews/HR): ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ರೆಹಾನ್ ಖಾನ್ ಎಂಬುವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ ಎಂದರು.
ಇನ್ನು ಭಾರತರತ್ನ ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.