ಮುಂಬೈ, ಏ 1 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಸಾಮಾನ್ಯ ಜನರ ಸಂಕಷ್ಟಗಳನ್ನು ಪರಿಹರಿಸಲು 'ಪರೇಶಾನಿ ಪೇ ಚರ್ಚಾ' ಕಾರ್ಯಕ್ರಮವನ್ನು ಯಾವಾಗ ಆಯೋಜಿಸುತ್ತೀರಿ ಎಂದು ಎನ್ಸಿಪಿ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಎನ್ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಈ ಒತ್ತಡವನ್ನು ದೂರಮಾಡಲು ಅವರೊಂದಿಗೆ ಸಂವಾದ ನಡೆಸಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳುತ್ತೇವೆ. ಆದರೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾಮಾನ್ಯ ಜನರ ಸಂಕಷ್ಟಗಳನ್ನು ಪರಿಹರಿಸಲು 'ಪರೇಶಾನಿ ಪೇ ಚರ್ಚಾ' ಕಾರ್ಯಕ್ರಮವನ್ನು ಯಾವಾಗ ನಡೆಸುತ್ತೀರಿ' ಎಂದು ಪ್ರಶ್ನಿಸಿದ್ದಾರೆ.
ಇನ್ನು ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಪಡುವ ಹಂತಕ್ಕೆ ನಿರುದ್ಯೋಗ ಬಂದು ತಲುಪಿದೆ. ಕೆಲ ಸೆಲೆಬ್ರಿಟಿಗಳು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವನ್ನು ನೋಡುವಂತೆ ಸಲಹೆ ನೀಡುತ್ತಿದ್ದಾರೆ ಎಂದರು.