ಬೆಂಗಳೂರು, ಏ 01 (DaijiworldNews/DB): ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಭೇಟಿ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ರಾಜ್ಯ ಭೇಟಿ ಕೈಗೊಳ್ಳಲಿದ್ದಾರೆ.
ಸುದ್ದಿಗಾರರಿಗೆ ಶುಕ್ರವಾರ ಈ ವಿಷಯ ತಿಳಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜೆ.ಪಿ. ನಡ್ಡಾ ಅವರು ತಿಂಗಳಾರ್ಧದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 16 ಮತ್ತು 17 ರಂದು ರಾಜ್ಯಕ್ಕೆ ಬರಲಿದ್ದು, 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷ ಬಲವರ್ಧನೆ ಮತ್ತು ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಕುರಿತು ಈ ವೇಳೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.