ಬೆಂಗಳೂರು, ಏ 1 (DaijiworldNews/HR): ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನ ನ್ಯಾಯಾಲಯ ವಜಾಗೊಳಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಜಾಕ್ಕೆ ಬಂಧನದ ಭೀತಿಗೆ ಸಕಾರಣಗಳಿಲ್ಲವೆಂದು ಕಾರಣ ನೀಡಿದೆ.
ಇನ್ನು ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 16ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಹಿನ್ನೆಲೆ ಬಂಧನದ ಭೀತಿಯಿಂದ ಸೋಮಣ್ಣ ಅರ್ಜಿ ಸಲ್ಲಿಸಿದ್ದರು.