ಬೆಂಗಳೂರು, ಏ 1 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 62 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 39,45,576ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 62 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 39,45,576ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40054 ಇದೆ.
ಇನ್ನು ರಾಜ್ಯದಲ್ಲಿಂದು 70 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,03,919ಕ್ಕೆ ಏರಿಕೆಯಾಗಿದ್ದು, 1561 ಸಕ್ರಿಯ ಪ್ರಕರಣಗಳಿವೆ.