ನವದೆಹಲಿ, ಏ 02 (DaijiworldNews/DB): ಭಾರತ-ನೇಪಾಳ ನಡುವಿನ ಗಡಿ ವಿವಾದವನ್ನು ಇತ್ಯರ್ಥಗೊಳಿಸಲು ಕಾರ್ಯಯೋಜನೆ ರೂಪುಗೊಳಿಸಬೇಕು ಎಂದು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ವಿಸ್ತರಣೆ ಮಾಡುವ ಸಲುವಾಗಿ ಪರಸ್ಪರ ಒಪ್ಪಿಗೆ ಸೂಚಿಸಲಾಗಿದೆ. ಅಲ್ಲದೆ ಇತರ 4 ಮಹತ್ವದ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳ ಪ್ರಧಾನಿಗಳು ಸಹಿ ಹಾಕಿದ್ದಾರೆ. ದ್ವಿಪಕ್ಷೀಯ ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಶೀಘ್ರ ಮುಂದಾಗಬೇಕು ಎಂದವರು ಈ ವೇಳೆ ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಗಡಿಯಾಚೆ ತಲುಪುವ ರೈಲು ಜಾಲ, ವಿದ್ಯುತ್ ಪ್ರಸರಣ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಶೇರ್ ಬಹದ್ದೂರ್ ದೇವುಬಾ ಅವರು ಶನಿವಾರ ಚಾಲನೆ ನೀಡಿದ್ದರು. ಆ ಬಳಿಕ ನಡೆದ ಸಭೆಯಲ್ಲಿ ಹಲವು ಮಹತ್ವದ ಮಾತುಕತೆಗಳು ನಡೆಯಿತು.