ಮಂಗಳೂರು, ಏ 03 (DaijiworldNews/HR): ಹಿಂದಿನ ಸರಕಾರದ ತಪ್ಪು ನೀತಿಗಳೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಾಗುತ್ತಿರುವ ಪೆಟ್ರೋಲ್ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರಕಾರದ ಪಾತ್ರ ಇಲ್ಲ. ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಕರ್ಮಕಾಂಡದಿಂದಾಗಿ ಬೆಲೆ ಏರಿಕೆಯಾಗಿದೆ ಎಂದರು.
ಇನ್ನು ರಷ್ಯಾ-ಯೂಕ್ರೇನ್ ನಡುವಿನ ಯುದ್ಧವು ಕೂಡ ತೈಲ ಬೆಲೆ ಏರಿಕೆಗೆ ಕಾರಣವಾಗಿದ್ದು, ರಷ್ಯಾದಿಂದ ತೈಲ ಆಮದು ಮಾಡುವ ಕಂಪನಿಗಳಿಗೆ ಯುದ್ಧದಿಂದ ತೊಂದರೆಯಾಗಿದೆ. ಕೇಂದ್ರ ಸರಕಾರ ತೈಲ ಬೆಲೆಯನ್ನು ನಿಯಂತ್ರಣದಲ್ಲಿರಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.