ಬೆಂಗಳೂರು, ಏ 03 (DaijiworldNews/DB): ಫ್ಯಾಕ್ಟರಿ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಶಾಜಿಯಾ (28) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದ ವೇಳೆಗೆ ಫ್ಯಾಕ್ಟರಿ ಯಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ಇದರಿಂದ ಬಿಡಿಸಿಕೊಳ್ಳಲಾಗದೆ ಸಾವನ್ನಪ್ಪಿದ್ದಾರೆ.
ಘಟನೆಗೆ ಮಾಲಕನ ಬೇಜವಾಬ್ದಾರಿಯೇ ಕಾರಣ ಎನ್ನಲಾಗಿದೆ. ಮಾಲಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.