ಬೆಂಗಳೂರು, ಏ 04 (DaijiworldNews/DB): ಸಚಿವ ಸಂಪುಟ ಪುನಾರಚನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 5ರಂದು ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳವಾರ ಮಧ್ಯಾಹ್ನ 1.55ಕ್ಕೆ ಸಿಎಂ ಮತ್ತು ಸಚಿವ ಗೋವಿಂದ ಕಾರಜೋಳ ಅವರು ದೆಹಲಿಗೆ ತೆರಳಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಸಂಬಂಧ ಈ ವೇಳೆ ಚರ್ಚೆ ನಡೆಸಲಿದ್ದಾರೆ.
ಬಳಿಕ ವರಿಷ್ಠರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಮಾತುಕತೆ ನಡೆಸಲಿದ್ದಾರೆ. ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಮಾತುಕತೆ ನಡೆಸಲು ಅಧಿವೇಶನ ಮುಗಿದ ಬಳಿಕ ದೆಹಲಿಗೆ ತೆರಳುವುದಾಗಿ ಈ ಹಿಂದೆ ಸಿಎಂ ಹೇಳಿದ್ದರು.