ಪಾಟ್ನಾ, ಏ 04 (DaijiworldNews/DB): ರಾಜ್ಯಸಭೆಗೆ ಆಯ್ಕೆಯಾಗುವ ಕಾರಣದಿಂದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸಲಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಅವರು ತಳ್ಳಿ ಹಾಕಿದ್ದಾರೆ.
ನಿತೀಶ್ ಹೇಳಿಕೆ ಬಗ್ಗೆ ಟ್ವೀಟ್ ಮಾಡಿರುವ ಜೆಡಿಯು ನಾಯಕ ಮತ್ತು ಬಿಹಾರ ಸಚಿವ ಸಂಜಯ್ ಕುಮಾರ್ ಝಾ, ಮಾಧ್ಯಮಗಳಲ್ಲಿ ಪ್ರಕಟವಾಗುವ ಕೆಲವು ವರದಿಗಳು ನನಗೇ ಆಶ್ಚರ್ಯ ಉಂಟು ಮಾಡುತ್ತದೆ ಎಂದು ನಿತೀಶ್ ಕುಮಾರ್ ಹೇಳಿರುವುದಾಗಿ ತಿಳಿಸಿದ್ದಾರೆ.
ನಿತೀಶ್ ಕುಮಾರ್ ಬಿಹಾರದಲ್ಲೇ ಇದ್ದುಕೊಂಡು ಬಿಹಾರ ಜನರ ಸೇವೆಯಲ್ಲೇ ಮುಂದುವರಿಯುತ್ತಾರೆ. ಅವರು ಮೇಲ್ಮನೆ ಸೇರಿದಂತೆ ಎಲ್ಲಿಗೂ ಹೋಗುವುದಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.