ಬೆಂಗಳೂರು,ಏ 05 (DaijiworldNews/HR): ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆ ಆಗಿದೆ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷ ಎಂದು ಧ್ವನಿ ವರ್ಧಕ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ಕಿಡಿಕಾರಿದ್ದಾರೆ.
ಇನ್ನು ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ ಎಂದಿದ್ದಾರೆ.
ಮೊದಲು ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.