ಬೆಂಗಳೂರು, ಏ 05 (DaijiworldNews/HR): ಸಮಾಜದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಮಾಂಸಕ್ಕೆ ಸಂಬಂಧಿಸಿದಂತೆ ಜನರು ತಮ್ಮದೇ ಆದ ನಿಲುವು ಹೊಂದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಕೆಲವು ಸಮುದಾಯಗಳನ್ನು ಓಲೈಸಲು ಪ್ರಯತ್ನಿಸುತ್ತಿವೆ. ಈ ವಿಚಾರದಲ್ಲಿ ಬಿಜೆಪಿ ಯಾವುದೇ ಸಮುದಾಯವನ್ನು ಬೆಂಬಲಿಸಿಲ್ಲ ಎಂದರು.
ಇನ್ನು ಮಸೀದಿಯಲ್ಲಿ ಹಿಜಾಬ್, ಹಲಾಲ್ ಕಟ್ ಮತ್ತು ಧ್ವನಿ ವರ್ಧಕಗಳಿಗೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸ್ಪಷ್ಟ ನಿಲುವನ್ನು ಹೊಂದಿಲ್ಲ. ಮೊದಲು ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.