ಹಿರಿಯೂರು, ಏ 05 (DaijiworldNews/HR): ಸಚಿವ ಕೆ.ಎಸ್. ಈಶ್ವರಪ್ಪ ಸಂವಿಧಾನ, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರದ ವಿರೋಧಿ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಮರನ್ನ ಓಲೈಸಲು ಡಿ.ಕೆ.ಶಿವಕುಮಾರ್ ಸಂವಿಧಾನ ಮೀರಿ ಮಾತನಾಡುತ್ತಿದ್ದಾರೆ ಎಂಬ ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿದ ಡಿಕೆಶಿ, ಮುಖ್ಯಮಂತ್ರಿ ಮಾತುಗಳಿಗೆ ಪ್ರತಿಕ್ರಿಯೆ ನೀಡಬಹುದು. ರಸ್ತೆಯಲ್ಲಿ ಹೋಗುವವರು ಆಡುವ ಮಾತಿಗೆ ಪ್ರತಿಕ್ರಿಯೆ ನೀಡಲಾಗದು ಎಂದರು.
ಇನ್ನು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಹವಣಿಸುತ್ತಿದ್ದು, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ. ಇತರರನ್ನು ಕೆಣಕಿ ಟ್ರ್ಯಾಪ್ ಮಾಡುವ ಪ್ರಯತ್ನ ಗಮನಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.