ಬೆಂಗಳೂರು, ಏ. 05 (DaijiworldNews/SM): ಎಸ್ಸಿ ಎಸ್ಟಿ ಸಮುದಾಯದವರಿಗೆ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಉಚಿತ ವಿದ್ಯುತ್ ನೀಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ಸರಕಾರ ತೀರ್ಮಾನಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನವಾರ ಸರಕಾರಿ ಆದೇಶ ಹೊರಡಿಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇನ್ನು ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.