ಶ್ರೀನಗರ, ಏ 06 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ನಡೆದಿದೆ.
ಉಗ್ರರು ಅವಂತಿಪೋರಾದ ತ್ರಾಲ್ ಎಂಬಲ್ಲಿ ಅಗಡಿ ಕುಳಿತಿರುವ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಇನ್ನು ತಕ್ಷಣ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಉಗ್ರರ ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.