ನವದೆಹಲಿ, ಏ 06 (DaijiworldNews/HR): ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಲೇಬೇಕು. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪ್ರಾಮುಖ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಲಾಲ್ ಕಟ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಉಲ್ಲೇಖಿಸಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿ ಯಾವ ರೀತಿ ಆಚರಿಸಬೇಕು ಎನ್ನುವುದು ಧಾರ್ಮಿಕ- ಸಾಮಾಜಿಕ ವಿಚಾರ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಲೇಬೇಕು ಎಂದರು.
ಇನ್ನು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ. ಯಾವುದೇ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನರು ತೀರ್ಮಾನ ಮಾಡುತ್ತಾರೆ. ಅವರು ಯಾವಾಗ ಮೂಕರಾಗಿದ್ದರು, ಯಾವಾಗ ಏನು ಮಾತನಾಡುತ್ತಾರೆ. ನಾನು ಏನು ಮಾತನಾಡುತ್ತೇನೆ ಎನ್ನುವುದನ್ನು ಜನ ತೀರ್ಮಾನಿಸುತ್ತಾರೆ ಎಂದಿದ್ದಾರೆ.