ದೆಹಲಿ, ಏ 06 (DaijiworldNews/HR): ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿ ಪಕ್ಷದ 42ನೇ ಸಂಸ್ಥಾಪನಾ ದಿನದ ಅಂಗವಾಗಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಕ್ಷದ 42 ನೇ ಸಂಸ್ಥಾಪನಾ ದಿನದಂದು ಲಕ್ನೋದ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿದರು.
ಇನ್ನು ಬಿಜೆಪಿಯ 42 ನೇ ಸಂಸ್ಥಾಪನಾ ದಿನದಂದು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಶುಭಕೋರಿ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶಸೇವೆಯೇ ಭಾರತೀಯ ಜನತಾ ಪಾರ್ಟಿಯ ಪಯಣವಾಗಿದ್ದು, ಕಳೆದ 7 ದಶಕಗಳಿಂದ ಸಮಾಜದ ಬಡವರು, ರೈತರು, ತುಳಿತಕ್ಕೊಳಗಾದವರು ಮತ್ತು ಮಹಿಳೆಯರ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಕೆಲಸ ಮಾಡುತ್ತಾ ಬಂದಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಬಿಜೆಪಿಯ 42 ನೇ ಸಂಸ್ಥಾಪನಾ ದಿನದಂದು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಶುಭಕೋರಿದ್ದಾರೆ.