ಹುಬ್ಬಳ್ಳಿ , ಏ 06 (DaijiworldNews/HR): ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾಗ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ನಡೆದಿದೆ.
ಮೃತ ಪೊಲೀಸ್ ಸಿಬ್ಬಂದಿಯನ್ನು ಪಂಡಿತ ಕಾಸರ್( 28 ) ಎಂದು ಗುರುತಿಸಲಾಗಿದ್ದು, ಮತ್ತೋರ್ವ ಮೃತರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಪಂಡಿತ್ ಕಾಸರ್ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಬಿರುಗಾಳಿ ಸಹಿತ ಮಳೆಯಾಗಿದ್ದರಿಂದ ಹುಬ್ಬಳ್ಳಿ - ಕಾರವಾರ ರಸ್ತೆಯಲ್ಲಿ ಮರಗಳು ಬಿದ್ದ ಪರಿಣಾಮ ಟ್ರಾಫಿಕ್ ಮಸ್ಯೆಯುಂಟಾಗಿತ್ತು. ಈ ವೇಳೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮತ್ತೋರ್ವ ಸಾವನ್ನಪ್ಪಿದ್ದಾರೆ.
ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.