ಬೆಂಗಳೂರು, ಏ 06 (DaijiworldNews/HR): ಬೆಂಗಳೂರಿನಲ್ಲಿ ಚಂದ್ರು ಎಂಬ ಯುವಕ ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವರು. ಹರ್ಷ ಕೊಲೆ ಪ್ರಕರಣದಲ್ಲೂ ಇದೇ ರೀತಿ ಹೇಳಿಕೆ ನೀಡಿದ್ದರು. ಹರ್ಷ ವಿರುದ್ಧ ಕ್ರಿಮಿನಲ್ ಕೇಸ್ ಇದೆ ಎಂದಿದ್ದರು. ನಂತರ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಹಾಗೇ ಹೇಳಿಕೆ ನೀಡಿದ್ದು, ಆಗ ಗೃಹ ಸಚಿವರು ಏನು ಹೇಳಿದ್ದರೆಂದು ಗೊತ್ತಿದೆ. ಇಂತಹವರು ಗೃಹ ಸಚಿವರಾಗಿದ್ದು ನಮ್ಮ ದೌರ್ಭಾಗ್ಯ ಎಂದು ಗೃ ಕಿಡಿಕಾರಿದ್ದಾರೆ.