ಮುಂಬೈ, ಏ 06 (DaijiworldNews/DB): ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ದೇಶಮುಖ್ ಅವರನ್ನುಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್ನಲ್ಲಿ ಜಾರಿ ನಿರ್ದೇಶನಾಲಯವು ಬಂಧನಕ್ಕೊಳಪಡಿಸಿತ್ತು. ಆ ಬಳಿಕ ಭ್ರಷ್ಟಾಚಾರ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲು ಮುಂಬೈ ನ್ಯಾಯಾಲಯವು ಸಿಬಿಐಗೆ ಅವಕಾಶ ನೀಡಿತ್ತು. ಆದರೆ ಅನಿಲ್ ದೇಶಮುಖ್ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿರುವ ಬಾಂಬೆ ಉಚ್ಚ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ದೇಶಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಅವರನ್ನು ಗೃಹಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಳಿಕ ಈ ಆರೋಪ ಪರಿಗಣಿಸಿ ಕಳೆದ ವರ್ಷ ನವೆಂಬರ್ನಲ್ಲಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು.