ನವದೆಹಲಿ, ಏ 06 (DaijiworldNews/HR): ಯುದ್ದಗ್ರಸ್ಥ ಉಕ್ರೇನ್ನಿಂದ ಯಾರೂ ಇಷ್ಟು ದೊಡ್ಡ ಪ್ರಮಾಣದಲ್ಲಿ ತನ್ನ ನಾಗರಿಕರನ್ನು ಸ್ಥಳಾಂತರಿಸಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅವರು, 'ಆಪರೇಷನ್ ಗಂಗಾ' ಮೂಲಕ ಉಕ್ರೇನ್ನಲ್ಲಿ ಸಿಲುಕಿದ್ದ ನಾಗರಿಕರನ್ನು ಭಾರತಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆಯು ಭಾರತ ನಡೆಸಿದ ಅತ್ಯಂತ ಸವಾಲಿನ ತೆರವು ಕಾರ್ಯಾಚರಣೆಯಾಗಿತ್ತು ಎಂದರು.
ಇನ್ನು ನಾಲ್ವರು ಕೇಂದ್ರ ಸಚಿವರು ಉಕ್ರೇನ್ನ ನೆರೆಯ ದೇಶಗಳಿಗೆ ಹೋಗದೇ ಇದ್ದಿದ್ದರೆ ಭಾರತಕ್ಕೆ ಇದೇ ಮಟ್ಟದ ಸಹಕಾರ ಸಿಗುತ್ತಿರಲಿಲ್ಲ ಎಂದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದಾಗಿ ಆಸಕ್ತಿವಹಿಸಿದ್ದು ಚುನಾವಣೆಯ ನಡುವೆಯೇ ಸಭೆಗಳನ್ನು ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂದು ತಿಳಿಸಿದ್ದಾರೆ.