ನವದೆಹಲಿ, ಏ 07 (DaijiworldNews/HR): ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದ್ದು, ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ. ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದರು.
ಇನ್ನು ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಉಳಿದ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.