ಬೆಂಗಳೂರು, ಏ 07 (DaijiworldNews/HR): ಬಿಜೆಪಿ ಸರ್ಕಾರವು ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡುವುದಿಲ್ಲ. ಅಂತಹ ಆಲೋಚನೆಯೂ ನಮ್ಮ ಮುಂದೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೂ ಪ್ರತಿಯೊಂದು ಧರ್ಮವನ್ನೂ ಸಮಾನವಾಗಿ ಕಾಣುತ್ತದೆ. ಯಾರೊಬ್ಬರು ಕೂಡ ಮೇಲೂ ಅಲ್ಲ, ಕೀಳೂ ಅಲ್ಲ. ಅವರವರ ಧರ್ಮ ಮತ್ತು ಆಚರಣೆಗೆ ಕಾನೂನಿನಲ್ಲಿ ಅವಕಾಶವಿದೆ ಎಂದರು.
ಇನ್ನು ನಾನೊಬ್ಬ ಸಚಿವನಾಗಿ ಸರ್ಕಾರದ ನಿಲುವು ಏನೆಂಬುದನ್ನು ಹೇಳುತ್ತೇನೆ. ಈಗ ನಡೆಯುತ್ತಿರುವ ಘಟನೆಗಳಿಗೂ, ನಮ್ಮ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಹಿಜಾಬ್, ಹಲಾಲ್ ಇಂತಹ ವಿಷಯಗಳಲ್ಲಿ ಸರ್ಕಾರದ ಪಾತ್ರವಿಲ್ಲ. ಆದರೆ ಕೆಲವು ಮಾಧ್ಯಮಗಳು ಇದನ್ನು ಸರ್ಕಾರದ ಪ್ರಾಯೋಜಿತ ಎಂದು ಹೇಳುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.