ಬೆಂಗಳೂರು, ಏ 08 (DaijiworldNews/MS): ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು , ಪೊಲೀಸರು ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಬಂದ್ ಬೆದರಿಕೆಯಿಂದ ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ.
ಹುಸ್ಕೂರು ಸನಿಹದ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್, ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿನ್ಸೆಂಟ್ ಪಲ್ಲೋಟಿ ಸೇರಿ ಬೆಂಗಳೂರಿನ ನಾಲ್ಕು ಶಾಲೆಗಳಲ್ಲಿ ಬಾಂಬ್ ಇಟ್ಟಿರೋದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ
ಬಾಂಬ್ ಬೆದರಿಕೆಯ ಇ-ಮೇಲ್ ನಿಂದಾಗಿ ಶಾಲೆಗಳಿಗೆ ಬಾಂಬ್ ಸ್ಕ್ವಾಡ್ , ಡಾಗ್ ಸ್ಕ್ವಾಡ್ ಸೇರಿದಂತೆ ವಿವಿಧ ತಂಡವು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.
ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಲಾಗಿದೆ ಇದುವರೆಗೆ ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ, ಸುಳಿವು ಸಿಕ್ಕಿಲ್ಲ, ಹಾಗೆಂದು ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.