ಬೆಂಗಳೂರು, ಏ 08 (DaijiworldNews/HR): ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ಸೇರಿದಂತೆ ನಿರಂತರ ಬೆಲೆ ಏರಿಕೆ ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿತು.
ಈ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ತೈಲ ಬೆಲೆ ನಿರಂತರ ಏರಿಕೆಯಾಗುತ್ತಿದ್ದು, ಪ್ರತಿದಿನ ಮಾರುಕಟ್ಟೆಯ ಶೇರು ದರದ ಏರಿಕೆ ಮಾದರಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿ ಜನರಿಗೆ ಹೊರೆಯಾಗಿದೆ ಎಂದರು.
ಇನ್ನು ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ಅನ್ನು ಉಚಿತವಾಗಿ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಗ್ಯಾಸ್ ಸಿಲಿಂಡರ್ ಬೆಲೆ ಸಾವಿರ ರೂ. ಆಗಿದೆ. ನಿತ್ಯ ಕೂಲಿ ಮಾಡಿ ಜೀವನ ಮಾಡುವವರಿಗೆ ಇಷ್ಟು ಹಣ ಕೊಟ್ಟು ಖರೀದಿ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಎನ್.ಎಂ. ನಭಿ, ಶಾಸಕರಾದ ರಮೇಶ್ಗೌಡ, ರವೀಂದ್ರ ಶ್ರೀಕಂಠಯ್ಯ, ತಿಪ್ಪೇಸ್ವಾಮಿ, ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಕೃಷ್ಣಪ್ಪ ಹಾಗೂ ಮತ್ತಿತರರು ಭಾಗವಹಿಸಿದ್ದರು.