ಶ್ರೀನಗರ, ಏ 10 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತತ್ಕ್ಷಣ ಸ್ಥಳದಲ್ಲಿ ಸುತ್ತುವರೆದ ಭದ್ರತಾಪಡೆಗಳು ಉಗ್ರರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಎನ್ಕೌಂಟರ್ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಈತ ಈ ಹಿಂದೆ ಸಿಆರ್ಪಿಎಫ್ ಯೋಧರ ಮೇಲೆ ನಡೆದಿದ್ದ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.
ಮತ್ತೋರ್ವ ಇಲ್ಲಿ ಅಡಗಿ ಕುಳಿತಿರುವ ಬಗ್ಗೆ ಗೊತ್ತಾಗಿದ್ದು, ಆತನಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿಪಿಯವರು ಭಾನುವಾರ ತಿಳಿಸಿದ್ದಾರೆ.