ಹಾವೇರಿ, ಏ. 10 (DaijiworldNews/SM): ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕನ್ನಡ ನಾಡು ಶಾಂತಿ, ನೆಮ್ಮದಿ, ಸೌಹಾರ್ದತೆಯಿಂದ ಕೂಡಿರಬೇಕು. ಯಾವುದೇ ಜಾತಿ ಧರ್ಮಗಳ ಬೇಧ ಭಾವವಿಲ್ಲದೇ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲು ರಾಜ್ಯದಜನತೆ ಸಹಕಾರವನ್ನು ನೀಡಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.