ಬೆಂಗಳೂರು, ಏ 11 (DaijiworldNews/HR): ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ಯಾಕೆಂದರೆ ದೇಶದಲ್ಲಿ ಅತಿಹೆಚ್ವು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನವರದ್ದು ಎಂದರು.
ಇನ್ನು ಮುಸ್ಕಾನ್ ಎಂಬ ವಿದ್ಯಾರ್ಥಿನಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.