ಮಂಡ್ಯ, ಏ 11 (DaijiworldNews/HR): ಜಿಲ್ಲೆಯಲ್ಲಿ ಶಾಂತಿಯುತ ವಾತಾವಣರಣವಿದ್ದು, ಮುಸ್ಕಾನ್ ತನಿಖೆಯಂತ ವಿಚಾರವನ್ನು ಇಟ್ಟುಕೊಂಡು ಉರಿಯೋ ಬೆಂಕಿಗೆ ತುಪ್ಪ ಸುರಿಯುವಂತ ಕೆಲಸ ಮಾಡಬಾರದು ಎಂದು ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಮುಸ್ಕಾನ್ ತನಿಖೆಗೆ ಆಗ್ರಹ ಮಾಡಿರುವ ಕುರಿತಗಿ ಮಾತನಾಡಿದ ಅವರು, ತನಿಖೆ ಮಾಡಿದ್ರೆ ತಪ್ಪೇನಿಲ್ಲ, ತನಿಖೆ ಆಗಿ ನಿಜ ಹೊರಗೆ ಬರಬೇಕು. ಮಂಡ್ಯ ಹಾಗೂ ರಾಜ್ಯದಲ್ಲಿ ವಾತಾವರಣ ಶಾಂತಿಯುತವಾಗಿದೆ. ರಾಜಕೀಯ ವಾಗಿ ಮಾತಾಡಿ ವಾತಾವರಣ ಕೆಡೆಸುವ ಕೆಲಸ ಮಾಡಬಾರದು ಎಂದರು.
ಇನ್ನು ಈ ಸಂದರ್ಭದಲ್ಲಿ ಎಲ್ಲಾ ಸಮಾಜಗಳು ಒಂದಾಗಿ, ಈ ಸಮಸ್ಯೆ ಬಗೆಹರಿಸಬೇಕು. ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು. ಯಾರೋ ಹೇಳಿಕೆಯಿಂದ ಬಲಿಪಶು ಆಗೋದು ಬಡವರು. ಈ ರೀತಿ ಯಾರು ಕೂಡ ಮಾಡಬಾರದು ಎಂದು ಹೇಳಿದ್ದಾರೆ.